ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದಲ್ಲಿ ಭುವನೇಶ್ವರಿಯ 25 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲಾಗಿದ್ದು, ಜನವರಿ 27 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅನಾವರಣಗೊಳಿಸಲಿದ್ದಾರೆ.
ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಹೊಯ್ಸಳ ಲಾಂಛನ, ವೈಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ.