
ಕೋಲಾರ: ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ, ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯಲ್ಲಿ ನಡೆದಿದೆ.
ಸಹೋದರರಾದ ಪವನ್ ಕುಮಾರ್, ಮಧು ಕುಮಾರ್ ನೀರು ಪಾಲಾಗಿದ್ದಾರೆ. ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋಗಿ ಅಣ್ಣನೂ ಸಾವನ್ನಪ್ಪಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.