ಜೈಪುರ್: ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಖಾಸಗಿ ಭಾಗಕ್ಕೆ ಗಾಜಿನ ಬಾಟಲಿ ಸೇರಿಸಿದ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ನಾಗೌರ್ ನಲ್ಲಿ ಕಳೆದವಾರ ಘಟನೆ ನಡೆದಿದ್ದು ಪೊಲೀಸರಿಗೆ ಮಾಹಿತಿ ನೀಡಿದರೆ ಕುಟುಂಬದವರನ್ನು ಹತ್ಯೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಜನವರಿ 19 ರಂದು ಮಹಿಳೆ ಮಜ್ಜಿಗೆ ಪಡೆಯಲು ಮನೆಯಿಂದ ಹೊರಗೆ ಬಂದಿದ್ದ ವೇಳೆ ಆರೋಪಿಯೊಬ್ಬ ಆಕೆಯನ್ನು ಅಡ್ಡಗಟ್ಟಿದ್ದಾನೆ. ಅವರಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ವಿಫಲವಾಗಿದ್ದು, ಮೂವರು ಪುರುಷರು ಆಕೆ ಮೇಲೆ ಅತ್ಯಾಚಾರ ಎಸಗಿ ಖಾಸಗಿ ಭಾಗಕ್ಕೆ ಗಾಜಿನ ಬಾಟಲಿ ಸೇರಿಸಿದ್ದಾರೆ.
ಮಹಿಳೆ ಮನೆಗೆ ಮರಳಿದ ನಂತರ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಬಳಿಕ ಆರೋಪಿ ಮಹಿಳೆಯ ಮನೆಗೆ ತೆರಳಿ ಪೊಲೀಸರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆರು ದಿನಗಳ ನಂತರ ಭಾನುವಾರ ಮಹಿಳೆಯ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಮೊದಲಿಗೆ ನಿರ್ಲಕ್ಷ್ಯವಹಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯನ್ನು ಪರ್ಬತ್ಸರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮೂವರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ.