alex Certify ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಗುಪ್ತಾಂಗಕ್ಕೆ ಬಾಟಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಗುಪ್ತಾಂಗಕ್ಕೆ ಬಾಟಲಿ

ಜೈಪುರ್: ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಖಾಸಗಿ ಭಾಗಕ್ಕೆ ಗಾಜಿನ ಬಾಟಲಿ ಸೇರಿಸಿದ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ನಾಗೌರ್ ನಲ್ಲಿ ಕಳೆದವಾರ ಘಟನೆ ನಡೆದಿದ್ದು ಪೊಲೀಸರಿಗೆ ಮಾಹಿತಿ ನೀಡಿದರೆ ಕುಟುಂಬದವರನ್ನು ಹತ್ಯೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಜನವರಿ 19 ರಂದು ಮಹಿಳೆ ಮಜ್ಜಿಗೆ ಪಡೆಯಲು ಮನೆಯಿಂದ ಹೊರಗೆ ಬಂದಿದ್ದ ವೇಳೆ ಆರೋಪಿಯೊಬ್ಬ ಆಕೆಯನ್ನು ಅಡ್ಡಗಟ್ಟಿದ್ದಾನೆ. ಅವರಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ವಿಫಲವಾಗಿದ್ದು, ಮೂವರು ಪುರುಷರು ಆಕೆ ಮೇಲೆ ಅತ್ಯಾಚಾರ ಎಸಗಿ ಖಾಸಗಿ ಭಾಗಕ್ಕೆ ಗಾಜಿನ ಬಾಟಲಿ ಸೇರಿಸಿದ್ದಾರೆ.

ಮಹಿಳೆ ಮನೆಗೆ ಮರಳಿದ ನಂತರ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಬಳಿಕ ಆರೋಪಿ ಮಹಿಳೆಯ ಮನೆಗೆ ತೆರಳಿ ಪೊಲೀಸರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆರು ದಿನಗಳ ನಂತರ ಭಾನುವಾರ ಮಹಿಳೆಯ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಮೊದಲಿಗೆ ನಿರ್ಲಕ್ಷ್ಯವಹಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯನ್ನು ಪರ್ಬತ್ಸರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮೂವರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...