alex Certify BIG NEWS: ಕೇಂದ್ರ ಸಂಪುಟದಲ್ಲಿ ಬಿ.ವೈ.ರಾಘವೇಂದ್ರಗೆ ಸ್ಥಾನ ವಿಚಾರ : ಮಾಜಿ ಸಿಎಂ BSY ಹೇಳಿದ್ದೇನು? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಸಂಪುಟದಲ್ಲಿ ಬಿ.ವೈ.ರಾಘವೇಂದ್ರಗೆ ಸ್ಥಾನ ವಿಚಾರ : ಮಾಜಿ ಸಿಎಂ BSY ಹೇಳಿದ್ದೇನು?

ನವದೆಹಲಿ: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಚರ್ಚಿಸಲು ಹೈಕಮಾಂಡ್ ಬುಲಾವ್ ಮೇರೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಮುಹೂರ್ತ ನಿಗದಿಯಾಗಿದೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕನ ಆಯ್ಕೆ, ರಾಜ್ಯಾಧ್ಯಕ್ಷರ ನೇಮಕ ಸೇರಿದಂತೆ ಎಲ್ಲಾ ವಿಚಾರಗಳನ್ನು ವರಿಷ್ಠರ ಜೊತೆ ಚರ್ಚಿಸುತ್ತೇನೆ. ರಾತ್ರಿ 8 ಗಂಟೆಗೆ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ ಎಂದರು.

ಇದೇ ವೇಳೆ ಕೇಂದ್ರ ಸಂಪುಟದಲ್ಲಿ ಸಂಸದ ಬಿ.ವೈ.ರಾಘವೇಂದ್ರಗೆ ಸ್ಥಾನ ಸಿಗುವ ಸಾಧ್ಯತೆ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವ ಸಂಪುಟದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...