alex Certify ಚುನಾವಣೆಗೆ ಸ್ಪರ್ಧಿಸದಿರುವ ಕಾರಣ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಗೆ ಸ್ಪರ್ಧಿಸದಿರುವ ಕಾರಣ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ: 449 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಿಸಲಾಗಿದ್ದು, ಸೋಮವಾರ ಉದ್ಘಾಟನೆಗೆ ಪ್ರಧಾನಿ ಮೋದಿ ಬರಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ ನಾನು ರಾಜಕೀಯದಿಂದ ನಿವೃತ್ತಿಯಾಗಿಲ್ಲ. ಆದರೆ, ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಅಷ್ಟೇ ಎಂದರು.

ಚುನಾವಣೆಗೆ ಸ್ಪರ್ಧಿಸದಿದ್ದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ನನಗೆ 70 ವರ್ಷ ದಾಟಿರುವ ಹಿನ್ನೆಲೆ ಈ ತೀರ್ಮಾನ ಮಾಡಿದ್ದೇನೆ. ಮತ್ತೊಬ್ಬರಿಗೆ ಅವಕಾಶ ಸಿಗಬೇಕೆಂಬ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಂಡಿದ್ದೇನೆ. ಇದು ಹೊರತುಪಡಿಸಿದರೆ ಬೇರೆ ಕಾರಣವಿಲ್ಲವೆಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...