alex Certify ಸರ್ವೆ ಮಾಡಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್: ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ವೆ ಮಾಡಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್: ಯಡಿಯೂರಪ್ಪ

ತುಮಕೂರು: ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಸರ್ವೆ ಮಾಡಿಸಿ ಯಾರು ಗೆಲ್ಲುತ್ತಾರೋ ಅಂತಹವರಿಗೆ ಟಿಕೆಟ್ ನೀಡಿ ನಮ್ಮ ಪಕ್ಷ ಅವರನ್ನು ಗೆಲ್ಲಿಸಿಕೊಂಡು ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾನು ಅಧಿಕಾರದಲ್ಲಿ ಇರಲಿ ಬಿಡಲಿ, ಬದುಕಿರುವವರೆಗೂ ಪಕ್ಷ ಸಂಘಟನೆ ಮಾಡುತ್ತೇನೆ. ಅಧಿಕಾರದಿಂದ ಕೆಳಗಿಳಿದರೂ ನನಗೆ ಜನರು ಪ್ರೀತಿ-ವಿಶ್ವಾಸ ತೋರಿಸುತ್ತಿದ್ದಾರೆ. ಪಕ್ಷ ಸಂಘಟನೆ ಕಾರ್ಯದಲ್ಲಿ ನಿರಂತರವಾಗಿ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...