
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸ್ಸಿಗೆ ಘಾಸಿಯಾಯಿತು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನನ್ನ ದೀರ್ಘಕಾಲದ ರಾಜಕೀಯ ಸಂಗಾತಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸ್ಸಿಗೆ ಘಾಸಿಯಾಯಿತು. ಭುಜದೆತ್ತರಕ್ಕೆ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದ ಆಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ. ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.