ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ 400ಕ್ಕೂ ಅಧಿಕ ಸ್ಥಾನ ಗಳಿಸಲಿರುವ ಎನ್.ಡಿ.ಎ. ಮೈತ್ರಿಕೂಟ ರಾಜ್ಯದಲ್ಲಿ 25 ರಿಂದ 26 ಸ್ಥಾನ ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿಶೇಷವಾಗಿ ಹಿಂದುಳಿದ ವರ್ಗಗಳ ಕಡೆ ಗಮನಹರಿಸಲಾಗಿದೆ. ಹೆಚ್ಚು ಸ್ಥಾನಗಳನ್ನು ಗಳಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗ ಕ್ಷೇತ್ರದಿಂದ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧೆ ಮಾಡುವ ವಿಚಾರದ ಬಗ್ಗೆ ಮಾತನಾಡಿದ ಯಡಿಯೂರಪ್ಪ, ಇವತ್ತು ಅಥವಾ ನಾಳೆ ಎಲ್ಲವೂ ಸರಿ ಹೋಗಲಿದೆ. ಈಶ್ವರಪ್ಪ ಅವರ ಜೊತೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.