alex Certify ಬಿಜೆಪಿ ಕಾರ್ಯಕಾರಿಣಿಯಲ್ಲಿ BSY ಮಹತ್ವದ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಕಾರ್ಯಕಾರಿಣಿಯಲ್ಲಿ BSY ಮಹತ್ವದ ಸಲಹೆ

ದಾವಣಗೆರೆ: ನಾನು ಈಗಾಗಲೇ ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಮೈಸೂರು ಸೇರಿದಂತೆ ಬಹುತೇಕ ಕಡೆ ಹೋಗಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆಲ್ಲುವುದು ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ಇರುತ್ತೇನೆ. ಕೋರ್ ಕಮಿಟಿ ಸಭೆಯಲ್ಲಿ ಕೆಲವು ಸಲಹೆಗಳನ್ನು ನೀಡುತ್ತೇನೆ. ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮುಂದಿನ ದಿನಗಳಲ್ಲಿ ರೂಪಿಸಬೇಕಾದ ಯೋಜನೆಗಳ ಬಗ್ಗೆ ಚರ್ಚೆ ನಡೆಸುತ್ತೇವೆ. ರಾಜ್ಯಾಧ್ಯಕ್ಷರೊಂದಿಗೆ ಚರ್ಚಿಸಿ ಪ್ರವಾಸ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...