
ಚಿತ್ರದುರ್ಗ: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾನವೀಯತೆ ತೋರಿದ್ದಾರೆ.
ಚಿತ್ರದುರ್ಗ ಸಮೀಪದ ಸಿರಿಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದ್ದು, ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ರಸ್ತೆಗೆ ಬಿದ್ದಿದ್ದಾರೆ. ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದವರನ್ನು ಇದೇ ಮಾರ್ಗವಾಗಿ ತೆರಳುತ್ತಿದ್ದ ಬಸವರಾಜ ಹೊರಟ್ಟಿ ಗಮನಿಸಿದ್ದಾರೆ.
ಕೂಡಲೇ ಕಾರು ನಿಲ್ಲಿಸಿ ಗಾಯಾಳುಗಳ ಬಳಿಗೆ ಧಾವಿಸಿ ಬಂದ ಅವರು, ಗಾಯಗೊಂಡ ದಂಪತಿ ಮತ್ತು ಅವರ ಪುತ್ರನಿಗೆ ಆತ್ಮಸ್ಥೈರ್ಯ ತುಂಬಿ ಪ್ರಥಮ ಚಿಕಿತ್ಸೆ ಮಾಡಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಭಾಪತಿ ಹೊರಟ್ಟಿಯವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.