ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ನರ್ಸಿಂಗ್ ಕಾಲೇಜುಗಳ 2025- 26ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಕೋರ್ಸ್ ಗಳ ಪ್ರವೇಶ ಶುಲ್ಕ ನಿಗದಿಪಡಿಸಿದೆ.
ಖಾಸಗಿ ನರ್ಸಿಂಗ್ ಕಾಲೇಜುಗಳಲ್ಲಿ ಶೇಕಡ 20ರಷ್ಟು ಸರ್ಕಾರಿ ಕೋಟಾದ ಸೀಟುಗಳಿಗೆ 10,000 ರೂ., ಆಡಳಿತ ಮಂಡಳಿ ಕೋಟಾ ಸೀಟುಗಳಿಗೆ 1 ಲಕ್ಷ ರೂ.ನಿಂದ 1.40 ಲಕ್ಷ ರೂ.ವರೆಗೆ ಶುಲ್ಕ ನಿಗದಿ ಮಾಡಲಾಗಿದೆ. ಸರ್ಕಾರಿ ನರ್ಸಿಂಗ್ ಕಾಲೇಜುಗಳ ಸೀಟುಗಳಿಗೂ 10,000 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ.
ನರ್ಸಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಕಳೆದ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸೀಟು ಹಂಚಿಕೆ ಮಾಡಲು ಸರ್ಕಾರ ಮುಂದಾಗಿದೆ. ಈ ವರ್ಷದ ಸಿಇಟಿಯಲ್ಲಿ 2.28 ಲಕ್ಷ ವಿದ್ಯಾರ್ಥಿಗಳು ಬಿಎಸ್ಸಿ ನರ್ಸಿಂಗ್ ಗೆ ಅರ್ಹತೆ ಪಡೆದಿದ್ದಾರೆ.