ಬಾರ್ಡರ್ ಸೆಕ್ಯುರಿಟಿ ಫೋರ್ಸ್(BSF) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 110 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ಯಾರಾಮೆಡಿಕಲ್ ಸ್ಟಾಪ್, ಎಸ್ಐ ಸ್ಟಾಫ್ ನರ್ಸ್, ಎಎಸ್ಐ ಮತ್ತು ಪಶು ವೈದ್ಯಕೀಯ ಸಿಬ್ಬಂದಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಪೂರ್ಣಾವಧಿಗೆ ನೇಮಕ ಮಾಡಲಾಗುತ್ತದೆ.
ಜೂನ್ 27 ರಿಂದ ಆನ್ಲೈನ್ ಅಪ್ಲಿಕೇಶನ್ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 26 ಕೊನೆಯ ದಿನವಾಗಿದೆ. ಬಿಎಸ್ಎಫ್ ಗ್ರೂಪ್ ಬಿ ಮತ್ತು ಸಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದೊಳಗಿರಬೇಕು. ವಿವಿಧ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇದೆ.
10 ನೇ ತರಗತಿ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದವರು, 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರಬೇಕು, ವಿಜ್ಞಾನದೊಂದಿಗೆ 12 ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಡಿಪ್ಲೋಮ, ನರ್ಸಿಂಗ್ ಹೊಂದಿರಬೇಕು.
ಗ್ರೂಪ್ ಬಿ ಮತ್ತು ಸಿ ಉದ್ಯೋಗಿಗಳ ಆಯ್ಕೆಗೆ ಲಿಖಿತ ಪರೀಕ್ಷೆ, ಭೌತಿಕ ಪ್ರಮಾಣಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಅಧಿಸೂಚನೆಯಂತೆ ಆಯ್ಕೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಕೆ ಮತ್ತು ವಿವರಗಳಿಗಾಗಿ https:/rectt.bsf.gov.in ವೆಬ್ ಸೈಟ್ ಗಮನಿಸಬಹುದಾಗಿದೆ.