ಬೆಂಗಳೂರು: 3 ದಿನದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ದುಬೈ ಪ್ರವಾಸಕ್ಕೆ ತೆರಳುವ ಮೊದಲು ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಾಗಿದ್ದು, ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಕೇಂದ್ರ ನಾಯಕರ ತೀರ್ಮಾನದಂತೆ ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗಲಿದೆ ಎಂದು ತಿಳಿಸಿದ್ದಾರೆ.