
ಬೆಂಗಳೂರು: ರಾಜ್ಯದಲ್ಲಿ ಐಟಿ ದಾಳಿ ಸಂಚಲನ ಮೂಡಿಸಿರುವ ಹೊತ್ತಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಇಂದು 8 ಗಂಟೆಗೆ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿ ಭೇಟಿ ವೇಳೆ ಕೇಂದ್ರ ಸಚಿವರು ಮತ್ತು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ.
ರಾಜ್ಯದಲ್ಲಿ ಖಾಲಿ ಉಳಿದಿರುವ ನಾಲ್ಕು ಸಚಿವ ಸ್ಥಾನಗಳಿಗೆ ಮತ್ತು ನಿಗಮ, ಮಂಡಳಿಗಳಿಗೆ ನೇಮಕಾತಿ ಮಾಡುವ ಕುರಿತಂತೆ ವರಿಷ್ಠರೊಂದಿಗೆ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನು ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಮೇಲೆ ನಡೆದ ಐಟಿ ದಾಳಿ ಸಂಚಲನ ಮೂಡಿಸಿದ್ದು, ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಚರ್ಚೆ ಶುರುವಾಗಿದೆ. ಇದೇ ಹೊತ್ತಲ್ಲಿ ಬೊಮ್ಮಾಯಿ ದೆಹಲಿ ಭೇಟಿ ಬಿಜೆಪಿ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.