
ಬೆಂಗಳೂರು: ಸಿಎಂ ಬದಲಾವಣೆ ಕೇವಲ ಊಹಾಪೋಹ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿ ಸಂಪುಟ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ. ಮೇ 10 ರೊಳಗೆ ರಾಜ್ಯ ಸಚಿವ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಎಂದು ಬಿ.ಎಸ್.ವೈ. ಹೇಳಿದ್ದಾರೆ.