ಶಿವಮೊಗ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ನಂತರ ದಿನಕ್ಕೆರಡು ಜಿಲ್ಲೆಗಳಲ್ಲಿ ರಾಜ್ಯ ಪ್ರವಾಸ ನಡೆಸುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ದೃಷ್ಟಿಯಿಂದ ಈಗಾಗಲೇ ಬಿಜೆಪಿ ನಾಯಕರ ಪ್ರವಾಸ ಆರಂಭವಾಗಿದೆ. ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕವಾದ ನಂತರ ಎಲ್ಲಾ ಕಡೆ ಓಡಾಡಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ರಾಜ್ಯದಾದ್ಯಂತ ಒಳ್ಳೆಯ ಬೆಂಬಲ ಸಿಗುತ್ತಿದೆ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಪೂರ್ವಭಾವಿಯಾಗಿ ನಾನು ಇನ್ನು ಮೂರು ದಿನಗಳ ನಂತರ ದಿನಕ್ಕೆ ಎರಡು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.