ಬೆಂಗಳೂರು: ಬಿ ಟಿವಿ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ಜಿ.ಎಂ. ಕುಮಾರ್ ಅವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವಂತೆ ಸಿಸಿಬಿ ಪೊಲೀಸರಿಗೆ ಹೈಕೋರ್ಟ್ ಆದೇಶ ನೀಡಿದೆ.
ಬಿ ಟಿವಿಯ ಮೂಲ ಒಡೆತನ ಹೊಂದಿದ ಈಗಲ್ ಸೈಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕ ಅಶ್ವಿನ್ ಮಹೇಂದ್ರ ಅವರು ಬೆಂಗಳೂರು ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿ ಜಿ.ಎಂ. ಕುಮಾರ್ ಅವರಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸಲ್ಲಿಸಿದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರು ಈ ತೀರ್ಪು ನೀಡಿದ್ದಾರೆ.
ಬೆಂಗಳೂರು ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಕುಮಾರ್ ಅವರಿಗೆ ಕಳೆದ ಡಿಸೆಂಬರ್ ನಲ್ಲಿ ನೀಡಿದ ಜಾಮೀನು ಹೈಕೋರ್ಟ್ ವಜಾಗೊಳಿಸಿದೆ. ಆರೋಪಿಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವಂತೆ ಸಿಸಿಬಿ ಪೊಲೀಸರಿಗೆ ನಿರ್ದೇಶನ ನೀಡಿದೆ.
ಆರೋಪಿ ಮೇಲೆ ದಾಖಲಾಗಿರುವ ಕ್ರಮ ಹಣ ವರ್ಗಾವಣೆ ವಂಚನೆ ಪ್ರಕರಣದ ಪ್ರಗತಿಯ ಬಗ್ಗೆ ಕೂಡಲೇ ಜಾರಿ ನಿರ್ದೇಶನಲಯಕ್ಕೆ ವರದಿ ನೀಡಿ ಆರೋಪಿಯ ವಿರುದ್ಧ ಮುಂದಿನ ಕ್ರಮಕ್ಕೆ ಪೂರಕವಾಗಿ ನಡೆದುಕೊಳ್ಳುವಂತೆ ಸಿಸಿಬಿಗೆ ತಿಳಿಸಲಾಗಿದೆ.