ನವದೆಹಲಿ: ಮುಂದಿನ ವರ್ಷ ವೈದ್ಯಕೀಯ ಕಾಲೇಜುಗಳಲ್ಲಿ ಹತ್ತು ಸಾವಿರ ಹೆಚ್ಚುವರಿ ಸೀಟುಗಳನ್ನು ಸೇರಿಸಲಾಗುವುದು ಮತ್ತು ಮುಂದಿನ ಐದು ವರ್ಷಗಳಲ್ಲಿ 75,000 ಸೀಟುಗಳನ್ನು ಸೇರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025 ಅನ್ನು ಮಂಡಿಸುವಾಗ ಘೋಷಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ದಾಖಲೆಯ ಎಂಟನೇ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಸತತ ಎಂಟು ಬಾರಿ ಕೇಂದ್ರ ಬಜೆಟ್ ಮಂಡಿಸಿದ ಏಕೈಕ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.