ಬೆಂಗಳೂರು : ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ಹೆಸರು ನಾಮಕರಣ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಬಾರಿ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು ನಗರ ವಿವಿಯನ್ನು ಡಾ. ಮನಮೋಹನ್ ಬೆಂಗಳೂರು ನಗರ ವಿವಿ ಎಂದು ಮರು ನಾಮಕರಣ ಮಾಡಲಾಗುವುದು ಎಂದು ಘೋಷಿಸಿದರು.
ಕರ್ನಾಟಕದಲ್ಲಿ ಹೊಸದಾಗಿ 500 ಪಬ್ಲಿಕ್ ಶಾಲೆಗಳು ಆರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
50 ಪ್ರೌಢ ಶಾಲೆಗಳು ಉನ್ನತರೀಕರಣ ಮಾಡುವುದಾಗಿ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇನ್ನೂ ಬೆಂಗಳೂರು ಟನಲ್ ರಸ್ತೆಗೆ 40 ಸಾವಿರ ಕೋಟಿ ರೂ. ಯೋಜನೆ ಹಂಚಿಕೆ ಮಾಡಿದ್ದಾರೆ.
ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ.