ನವದೆಹಲಿ : ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮೊಬೈಲ್ , ಎಲೆಕ್ಟ್ರಿಕ್ ಕಾರು, LED ಟಿವಿ ಬೆಲೆ ಇಳಿಕೆ ಮಾಡುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ನೊಂದಿಗೆ ಆಟಿಕೆಗಳ ವಲಯಕ್ಕಾಗಿ, ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಸರ್ಕಾರವು ಯೋಜನೆಯನ್ನು ಜಾರಿಗೊಳಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.