ಬೆಂಗಳೂರು : ಮದ್ಯ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮದ್ಯದ ದರ ಮತ್ತಷ್ಟು ಏರಿಕೆಯಾಗಲಿದೆ.
ಹೌದು, ಸರ್ಕಾರ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಿದ್ದು, ಈ ಮೂಲಕ ರಾಜ್ಯದಲ್ಲಿ ಮದ್ಯದ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ. ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಎತ್ತಿನ ಹೊಳೆ ಯೋಜನೆಗೆ 553 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮಧುಗಿರಿ 45, ಕೊರಟಗೆರೆಯಲ್ಲಿ 62 ಕೆರೆ ತುಂಬಿಸುವ ಗುರಿ ಹೊಂದಲಾಗಿದೆ. ಅಂತರ್ಜಲ ಹೆಚ್ಚಿಸಲು ಯೋಜನೆಗಳನ್ನು ಅನುಷ್ಠಾಗೊಳಿಸಲಾಗುವುದು.1080 ಕೋಟಿ ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆ ಜಾರಿಗೊಳಿಸಲಾಗುವುದು. ಮೊದಲ ಹಂತದಲ್ಲಿ 70 ಕೆರೆ ತುಂಬಿಸುವ ಯೋಜನೆ ಕೈಗೊಳ್ಳಲಾಗುವುದು ಎಂದರು.
ರಾಜ್ಯ ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.