![](https://kannadadunia.com/wp-content/uploads/2024/02/Karnataka-budjet.jpg)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ. ಇದು ಅವರ ದಾಖಲೆಯ 15 ನೇ ಬಜೆಟ್ ಮಂಡನೆ ಆಗಿದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ಸೀಮಿತವಾಇಗರುವುದಿಲ್ಲ. ರಾಜ್ಯದ ಒಟ್ಟು ಬಜೆಟ್ 3,71,383 ಕೋಟಿ ರೂ. ಆಗಿದೆ. ಮುಂದಿನ ದಿನದಲ್ಲಿ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕರ್ನಾಟಕ ಮಾದರಿ ಅಭಿವೃದ್ಧಿಗೆ ನಾಂದಿ ಹಾಡಲಿದ್ದೇವೆ ಎಂದರು.
ಜನರಲ್ಲಿ ಮತ್ತೆ ವಿಶ್ವಾಸ ಮೂಡಿಸುವುದು ನಮ್ಮ ಕರ್ತವ್ಯವಾಗಿದೆ. ಜಿಎಸ್ ಟಿ ಸಂಗ್ರಹ ಶೇ. 18 ರಷ್ಟು ಹೆಚ್ಚಳವಾಗಿದೆ. ರಾಜ್ಯ ತೀವ್ರ ಬರಗಾಲವನ್ನು ಎದುರಿಸಬೇಕಾಯಿತು. ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬಿಯರ್ ಸೇರಿ ಮದ್ಯದ ದರವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.