alex Certify Budget Breaking‌ : ಹಿರೇಕೆರೂರು ತಾಲೂಕಿನಲ್ಲಿ ವಚನಕಾರ ʻಸರ್ವಜ್ಞನ ಸ್ಮಾರಕʼ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Budget Breaking‌ : ಹಿರೇಕೆರೂರು ತಾಲೂಕಿನಲ್ಲಿ ವಚನಕಾರ ʻಸರ್ವಜ್ಞನ ಸ್ಮಾರಕʼ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ.

ಶರಣರ ಚಿಂತನೆ, ಸಾಹಿತ್ಯ ಕುರಿತು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು, ಬಸವ ಜಯಂತಿಯಂದು ಸರ್ವಧರ್ಮ ಸಂಸತ್ತು ಕಾರ್ಯಕ್ರಮಗಳ ಮೂಲಕ ಬಸವಾದಿ ಶರಣರ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಸವಣ್ಣನವರ ಜನ್ಮಸ್ಥಳ ಅಭಿವೃದ್ಧಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಎಲ್ಲಾ ಕಛೇರಿಗಳು, ಅಂಗಡಿ-ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ.

ಸಂತ ಕವಿ ಕನಕದಾಸ ಅಧ್ಯಯನ ಕೇಂದ್ರದ ಮೂಲಕ ತತ್ವಪದ, ಕೀರ್ತನ ಸಾಹಿತ್ಯ ಮತ್ತು ಭಕ್ತಿ ಚಳವಳಿ ಸೇರಿದಂತೆ ಸಾಹಿತ್ಯ ಸಮೀಕ್ಷೆ, ಸಂಗ್ರಹಣೆ, ಪ್ರಕಟಣೆ ಮತ್ತು ಪ್ರಸಾರ ಕಾರ್ಯ ಕೈಗೊಳ್ಳಲು ಒಂದು ಕೋಟಿ ರೂ. ಅನುದಾನ ನೀಡಲಾಗುವುದು.

 ತತ್ವಪದಕಾರರು ಮತ್ತು ಸೂಫಿಗಳ ಬದುಕು ಮತ್ತು ಸಂದೇಶಗಳ ಅಧ್ಯಯನ ಕೈಗೊಳ್ಳಲು ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಮತ್ತು ಶಿವಯೋಗಿ ಸಿದ್ಧರಾಮೇಶ್ವರರವರ ಬದುಕು-ಬರಹ ಕುರಿತು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠಗಳ ಸ್ಥಾಪನೆ. ಹಿರೇಕೆರೂರು ತಾಲ್ಲೂಕಿನಲ್ಲಿ ವಚನಕಾರ ಸರ್ವಜ್ಞನ ಸ್ಮಾರಕ ನಿರ್ಮಾಣ. . ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...