ಬೆಂಗಳೂರು : ಯುವನಿಧಿ ಯೋಜನೆ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, 25,000 ಮಂದಿಗೆ ‘ಉದ್ಯಮ ಶೀಲತಾ ಅಭಿವೃದ್ಧಿತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇಂದು ಬಜೆಟ್ ಮಂಡನೆಯಲ್ಲಿ ಈ ಕುರಿತು ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಹಸಿವು ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಅನ್ನ-ಸುವಿಧ ಯೋಜನೆ ಜಾರಿಗೆ ತರಲಾಗಿದ್ದು, ಈ ಮೂಲಕ ಹೋಮ್ ಡೆಲಿವರಿ ಆಯಪ್ ಮೂಲಕ ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಯುವಕರ ಏಳಿಗೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು,, ಕಲಬುರಗಿ, ಕೊಪ್ಪಳದ ತರಬೇತಿ ಕೇಂದ್ರ, ವರುಣಾದಲ್ಲೂ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.