ಬೆಂಗಳೂರು : ಕ್ರೀಡಾಪಟುಗಳಿಗೆ ತರಬೇತಿಗಾಗಿ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹಧನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಗುರಿ ಒಲಂಪಿಕ್ ಪದಕ ಯೋಜನೆ ಅಡಿಯಲ್ಲಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿಕೈಗೊಳ್ಳಲು ವಾರ್ಷಿಕ 10 ಲಕ್ಷ ರೂ ಪ್ರೋತ್ಸಾಹ ಧನವನ್ನು 3 ವರ್ಷದವರೆಗೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಬರಪೂರ ಅನುದಾನಗಳನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಧನಸಹಾಯ ಒದಗಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ.ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು.ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ಒದಗಿಸಲಾಗುವುದು. ರಾಜ್ಯ ಸರ್ಕಾರದಿಂದ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕೈಗಾರಿಕಾ ವಲಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.ವಿವಿಧ ಯೋಜನೆಗಳು, ಹೊಸ ಬಂಡವಾಳ ಆಕರ್ಷಿಸುವ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.