ಬೆಂಗಳೂರು : ರಾಜ್ಯ ಸರ್ಕಾರದಿಂದ ಬಡ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವಿದ್ಯಾರ್ಥಿಗಳ ಭೋಜನಾ ವೆಚ್ಚ 100 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಬಜೆಟ್ ಮಂಡನೆಯಲ್ಲಿ ಈ ಕುರಿತು ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಎಸ್ ಸಿ, ಎಸ್ ಟಿ, ಹಿಂದುಳಿದ ವಿದ್ಯಾರ್ಥಿನಿಲಯಗಳಿಗೆ 2,710 ಕೋಟಿ ರೂ. ಮೀಸಲು, ವಿದ್ಯಾರ್ಥಿಗಳ ಭೋಜನಾ ವೆಚ್ಚ 100 ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಹಸಿವು ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಅನ್ನ-ಸುವಿಧ ಯೋಜನೆ ಜಾರಿಗೆ ತರಲಾಗಿದ್ದು, ಈ ಮೂಲಕ ಹೋಮ್ ಡೆಲಿವರಿ ಆಯಪ್ ಮೂಲಕ ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಯುವಕರ ಏಳಿಗೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು,, ಕಲಬುರಗಿ, ಕೊಪ್ಪಳದ ತರಬೇತಿ ಕೇಂದ್ರ, ವರುಣಾದಲ್ಲೂ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.