![](https://kannadadunia.com/wp-content/uploads/2024/02/Karnataka-budjet.jpg)
ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ಬಜೆಟ್ ಮಂಡನೆಯಲ್ಲಿ ಈ ಕುರಿತು ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಸಿವು ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಅನ್ನ-ಸುವಿಧ ಯೋಜನೆ ಜಾರಿಗೆ ತರಲಾಗಿದ್ದು, ಈ ಮೂಲಕ ಹೋಮ್ ಡೆಲಿವರಿ ಆಯಪ್ ಮೂಲಕ ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಯುವಕರ ಏಳಿಗೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು,, ಕಲಬುರಗಿ, ಕೊಪ್ಪಳದ ತರಬೇತಿ ಕೇಂದ್ರ, ವರುಣಾದಲ್ಲೂ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.