ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶುಲ್ಕದಲ್ಲಿ ಶೇ.50ರಷ್ಟು ಮರುಪಾವತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಕೆಇಎ ಮೂಲಕ ವೃತ್ತಿಪರ ಕೋರ್ಸ್ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ಸೀಮಿತವಾಗಿದೆ. ಜೊತೆಗೆ ಶುಲ್ಕದಲ್ಲಿ ಶೇ.50 ರಷ್ಟು ಮರು ಪಾವತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲಿಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.