ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸುತಿದ್ದಾರೆ.
ಮಧ್ಯಂತರ ಬಜೆಟ್ ಭಾಷಣ ಆರಂಭಿಸಿರುವ ನಿರ್ಮಲಾ ಸೀತಾರಾಮನ್ ಅವರು ‘2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
2014ರಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗ ಹಲವು ಸವಾಲುಗಳಿದ್ದವು. ಸಾರ್ವಜನಿಕರ ಹಿತದೃಷ್ಟಿಯಿಂದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ಜನರಿಗೆ ಉದ್ಯೋಗವನ್ನು ಪಡೆಯಲು ಅನೇಕ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಮಾಡಲಾಗಿದೆ. ಎಲ್ಲಾ ವರ್ಗ ಮತ್ತು ಜನರ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯುತ್ತಿದ್ದು, 2047 ರ ವೇಳೆಗೆ ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಎಲ್ಲಾ ಮೂಲಭೂತ ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತಿವೆ, ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ. ನಮ್ಮ ಯುವ ದೇಶವು ಹೆಚ್ಚಿನ ಆಕಾಂಕ್ಷೆಗಳನ್ನು ಹೊಂದಿದೆ, ಅದರ ವರ್ತಮಾನದ ಬಗ್ಗೆ ಹೆಮ್ಮೆಯಿದೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭರವಸೆ ಮತ್ತು ನಂಬಿಕೆಯನ್ನು ಹೊಂದಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ.ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ. ‘2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ ಎಂದು ಹೇಳಿದರು.