ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1000 ರೂ, ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1000 ರೂ ಹೆಚ್ಚಳ ಹಾಗೂ ಸಹಾಯಕಿಯರ ಗೌರವಧನ 700 ರೂಗೆ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಇನ್ನೂ, ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಎತ್ತಿನ ಹೊಳೆ ಯೋಜನೆಗೆ 553 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮಧುಗಿರಿ 45, ಕೊರಟಗೆರೆಯಲ್ಲಿ 62 ಕೆರೆ ತುಂಬಿಸುವ ಗುರಿ ಹೊಂದಲಾಗಿದೆ. ಅಂತರ್ಜಲ ಹೆಚ್ಚಿಸಲು ಯೋಜನೆಗಳನ್ನು ಅನುಷ್ಠಾಗೊಳಿಸಲಾಗುವುದು.1080 ಕೋಟಿ ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆ ಜಾರಿಗೊಳಿಸಲಾಗುವುದು. ಮೊದಲ ಹಂತದಲ್ಲಿ 70 ಕೆರೆ ತುಂಬಿಸುವ ಯೋಜನೆ ಕೈಗೊಳ್ಳಲಾಗುವುದು ಎಂದರು