ನವದೆಹಲಿ : ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ದಾಖಲೆಯ ಎಂಟನೇ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಸತತ ಎಂಟು ಬಾರಿ ಕೇಂದ್ರ ಬಜೆಟ್ ಮಂಡಿಸಿದ ಏಕೈಕ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
#UnionBudget2025 | “I propose to introduce the New Income Tax Bill next week,” says FM Nirmala Sitharaman in Parliament pic.twitter.com/yfHIjzyMxu
— ANI (@ANI) February 1, 2025