ಬೆಂಗಳೂರು : ಎಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ.