ಬೆಂಗಳೂರು : ರಾಜ್ಯದ ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ ಯೋಜನೆ’ ಘೋಷಣೆ ಮಾಡಲಾಗಿದ್ದು, 5 ಲಕ್ಷ ರೂ ನಗದು ರಹಿತ ಚಿಕಿತ್ಸೆ ನೀಡಲಾಗುತ್ತದೆ.
ಹೌದು, ಮಾನ್ಯತೆ ಪಡೆದ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂವರೆಗೆ ನಗದು ರಹಿತ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಟಾನ ಮಾಡುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹಾಗೂ ರಾಜ್ಯದ ಪರ್ತಕರ್ತರಿಗೆ ನೀಡಲಾಗುತ್ತಿದ್ದ ಮಾಸಾಶನವನ್ನು 12 ಸಾವಿರದಿಂದ 15 ಸಾವಿರ ರೂ ಹಾಗೂ ಕುಟುಂಬ ಮಾಸಾಶನ 7500 ರೂಗಳಿಗೆ ಹೆಚ್ಚಳ ಮಾಡಲಾಗಿದೆ.
ಹಾಗೂ ಸಿಎಂ ಸಿದ್ದರಾಮಯ್ಯ, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ ಮಕ್ಕಳಿಗೂ ಪ್ರೋತ್ಸಾಹ ಧನ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ವಿಕಲಚೇತನರ ಸಮೀಕ್ಷೆ ನಡೆಸಲಾಗುವುದು ಎಂದರು.
ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು ಎಂದರು.