alex Certify Budjet Breaking : ಹೀಗಿದೆ ಇಂದು ‘ಸಿಎಂ ಸಿದ್ದರಾಮಯ್ಯ’ ಮಂಡಿಸಿದ ರಾಜ್ಯ ಸರ್ಕಾರದ ಬಜೆಟ್ ಹೈಲೆಟ್ಸ್ |Budget 2024 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Budjet Breaking : ಹೀಗಿದೆ ಇಂದು ‘ಸಿಎಂ ಸಿದ್ದರಾಮಯ್ಯ’ ಮಂಡಿಸಿದ ರಾಜ್ಯ ಸರ್ಕಾರದ ಬಜೆಟ್ ಹೈಲೆಟ್ಸ್ |Budget 2024

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಮಧ್ಯಮ ವರ್ಗದ ಜನರಿಗೆ, ವೈದ್ಯಕೀಯ ಕ್ಷೇತ್ರಕ್ಕೆ, ಕೃಷಿಗೆ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..ಇಲ್ಲಿದೆ ಸಂಪೂರ್ಣ ಮಾಹಿತಿ. ಮುಂಬರುವ ಲೋಕಸಭಾ ಚುನಾವಣೆ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷದ ಬಜೆಟ್ ಮಂಡಿಸಿದ್ದಾರೆ.

ಹೀಗಿದೆ ಕರ್ನಾಟಕ ಬಜೆಟ್ ನ ಹೈಲೆಟ್ಸ್

* ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್ಎಫ್ಪಿ ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು.

* ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.

* ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.

* ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಾಣ ಮಾಡಲಾಗುವುದು. 35 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.
76 ಗೋದಾಮುಗಳ ನಿರ್ಮಾಣಕ್ಕೆ 376 ಕೋಟಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.

*  APMCಗಳಲ್ಲಿ ವಿದ್ಯುತ್ಚಾಲಿತ ವಾಹನಗಳಿಗೆ ಚಾರ್ಜಿಂಗ್ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆಯೂ ಘೋಷಣೆ ಮಾಡಲಾಗಿದೆ.

* ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು ಇಡಲಾಗುವುದು. 1.33 ಕೋಟಿ ಮಹಿಳೆಯರಿಗೆ ಯೋಜನೆಯಿಂದ ಲಾಭವಾಗಲಿದೆ. ಜನವರಿ 31ರವರೆಗೆ 1.27 ಕೋಟಿ ಮಹಿಳೆಯರ ನೋಂದಣಿಯಾಗಿದೆ, 11726 ಕೋಟಿ ನೇರವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ.

• ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ. ಒದಗಿಸಲಾಗುವುದು. ಜೈನ್ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

* ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುವುದು,ಈ ಮೂಲಕ 10 ಸಾವಿರ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

* ಮೈಸೂರು, ಕಿತ್ತೂರು ಕರ್ನಾಟಕದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು, ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುವುದು. ಈ ಮೂಲಕ 10 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

* ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

* ಹಸಿವು ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಅನ್ನ-ಸುವಿಧ ಯೋಜನೆ ಜಾರಿಗೆ ತರಲಾಗಿದ್ದು, ಈ ಮೂಲಕ ಹೋಮ್ ಡೆಲಿವರಿ ಆಯಪ್ ಮೂಲಕ ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

* ರಾಜ್ಯದ ಯುವಕರ ಏಳಿಗೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು,, ಕಲಬುರಗಿ, ಕೊಪ್ಪಳದ ತರಬೇತಿ ಕೇಂದ್ರ, ವರುಣಾದಲ್ಲೂ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

* ಬೆಂಗಳೂರಿನ ಬಡಜನರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಬಡಜನರಿಗಾಗಿ ಉಚಿತ ಪ್ರಯೋಗಾಲಯ ಸೇವೆ ಒದಗಿಸುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.ಇದಕ್ಕಾಗಿ 430 ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. 20 ಕೋಟಿ ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

* ವೈದ್ಯಕೀಯ ಕಾಲೇಜುಗಳ ನಿರ್ಮಾಣ, ಉಪಕರಣ ಖರೀದಿಗೆ 400 ಕೋಟಿ ಅನುದಾನ ನೀದಲಾಗುವುದು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 130 ಕೋಟಿ ರೂ ಒದಗಿಸಲಾಗುವುದು ಎಂದರು.

* ಕಬ್ಬು ಬೆಳೆಗಾರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ.

* ಇಂದು ಬಜೆಟ್ ಮಂಡನೆಯಲ್ಲಿ ಈ ಕುರಿತು ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಲಾಗುವುದು. ಮಂಡ್ಯದ ಮೈಶುಗರ್ ಕಾರ್ಖಾನೆ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.

* ಹಸಿವು ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಅನ್ನ-ಸುವಿಧ ಯೋಜನೆ ಜಾರಿಗೆ ತರಲಾಗಿದ್ದು, ಈ ಮೂಲಕ ಹೋಮ್ ಡೆಲಿವರಿ ಆಯಪ್ ಮೂಲಕ ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

* ಅಂಗನವಾಡಿ ಕಾರ್ಯಕರ್ತರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು. 100 ಕೋಟಿ ವೆಚ್ಚದಲ್ಲಿ 1,000 ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

* ಮಾಜಿ ದೇವದಾಸಿಯರ ಮಾಸಾಶನ 1,500 ರೂ.ನಿಂದ 2000 ರೂ. ಹೆಚ್ಚಳ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 1,200 ರೂ. ಗಳಿಗೆ ಹೆಚ್ಚಳ ಮಾಡಲಾಗುವುದು. 1,500 ವಿಶೇಷಚೇತನರಿಗೆ ದ್ವಿಚಕ್ರ ವಾಹನ ವಿತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

* ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ಯಾಚ್ಯುವಿಟಿ ಸೌಲಭ್ಯ ನೀಡಲಾಗುವುದು, ಅಂಗವಾಡಿ ಕಟ್ಟಡ ಅಭಿವೃದ್ಧಿಗೆ 300 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

* ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಲಾಗುವುದು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂಸಹಾಯಕಿಯರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

* ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ವರುಣಾ ಕ್ಷೇತ್ರಕ್ಕೆ ಎರಡು ಸಾವಿರಕೋಟಿ ರೂ. ಮೀಸಲು, ಕಾಲುವೆಗಳ ಅಭಿವೃದ್ಧಿಗೆ ಎರಡು ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. 2024-25 ರಲ್ಲಿ 3 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

* ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮತ್ತೆ ಬಿಯರ್ ದರ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬಜೆಟ್ ಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.ಮದ್ಯದ ಘೋಷಿತ ಸ್ಲಾಬ್ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದರು. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ ಎಂದು ಮಾಹಿತಿ ನೀಡಿದರು.

* ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆಗೆ 4 ಕೇಂದ್ರಗಳನ್ನು ಆರಂಭಿಸಲಾಗುವುದು. 4 ಅನುಪಾಲನಾ ಕೇಂದ್ರಗಳ ಸ್ಥಾಪನೆಗೆ 2 ಕೋಟಿ ರೂ. ಅನುದಾನ ಒದಗಿಸಲಾಗುವುದು. 1,500 ವಿಶೇಷ ಚೇತನರಿಗೆ ದ್ವಿಚಕ್ರ ವಾಹನಗಳ ವಿತರಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

*ಕೈಗೆಟಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಮತ್ತು ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಒದಗಿಸಲು ನಮ್ಮ ಮಿಲ್ಲೆಟ್ ಗೆ ಹೊಸ ಕಾರ್ಯಕ್ರಮ ಪ್ರಾರಂಭ.
*ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆಗೆ ರೈತರಿಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿದ e-SAP ತಂತ್ರಾಂಶದ ಪರಿಚಯ.
*ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್ ಸ್ಥಾಪನೆ.
*ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಕೃಷಿ ಇಲಾಖೆ ಅಧೀನದಲ್ಲಿ ಪ್ರತ್ಯೇಕ ಕೃಷಿ ಆಯುಕ್ತಾಲಯ ಸ್ಥಾಪನೆ.
*ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು PMFME ಯೋಜನೆಯಡಿ 80 ಕೋಟಿ ರೂ.

ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದೇನು..?

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.

*ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

*ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ವಿದ್ಯುತ್.

*ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ನಿರಂತರ ನೀರಿನ ಸೌಲಭ್ಯ, ಉಚಿತ ಕರೆಂಟ್ ಗೆ 25 ಕೋಟಿ ರೂಪಾಯಿ ಮೀಸಲು ಇಡಲಾಗುವುದು.

*ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು

*ರಾಜ್ಯದ 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ 10 ಕೋಟಿ ರೂಪಾಯಿ ಅನುದಾನ ನೀಡಲಾಗುವುದು.

‘*ರಾಜ್ಯದ 20 ಸಾವಿರ ಸೈನ್ಸ್ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.

*ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಹಾಗೂ ಇಂಟರ್ನೆಟ್ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು.

*2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು.

ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್ಎಫ್ಪಿ ಕರೆಯಲಾಗುವುದು.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...