ಬೆಂಗಳೂರು : ‘ಡೀಪ್ ಫೇಕ್’ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಮುಖ್ಯಮಂತ್ರಿ ಡೀಪ್ ಫೇಕ್ ನಂತರ ಸೈಬರ್ ಅಪರಾಧಗಳ ವಿರುದ್ದ ಕ್ರಮಕ್ಕೆ 43 ಸಿಇಎನ್ ಪೊಲೀಸ್ ಠಾಣೆ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ.ಈ ಹಿಂದೆ ನಟಿ ರಶ್ಮಿಕಾ ಮಂದಣ್ಣ ಸೇರಿ ಹಲವು ನಟ ನಟಿಯರ ಡೀಫ್ ಫೇಕ್ ವಿಡಿಯೋ ವೈರಲ್ ಆಗಿತ್ತು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಭಾರಿ ಆಗ್ರಹ ಕೇಳಿಬಂದಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ, ಕುತೂಹಲಗಳೂ ಹೆಚ್ಚಾಗಿವೆ.