alex Certify Budget Breaking : ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Budget Breaking : ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹಲವು ಕೊಡುಗೆ ಘೋಷಿಸಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..?

* ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.

*ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

*ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ವಿದ್ಯುತ್.

*ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ನಿರಂತರ ನೀರಿನ ಸೌಲಭ್ಯ, ಉಚಿತ ಕರೆಂಟ್ ಗೆ 25 ಕೋಟಿ ರೂಪಾಯಿ ಮೀಸಲು ಇಡಲಾಗುವುದು.

*ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು

*ರಾಜ್ಯದ 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ 10 ಕೋಟಿ ರೂಪಾಯಿ ಅನುದಾನ ನೀಡಲಾಗುವುದು.

‘*ರಾಜ್ಯದ 20 ಸಾವಿರ ಸೈನ್ಸ್ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.

*ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಹಾಗೂ ಇಂಟರ್ನೆಟ್ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು.

*2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...