
ಬೆಂಗಳೂರು: ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಾಗುವುದು. ಮಾ. 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.