ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ ನಲ್ಲಿ ಬಜೆಟ್ ಮಂಡಿಸಲಿದ್ದು, ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ.
ಫೆಬ್ರವರಿ 25 ರ ವರೆಗೂ ಪೂರ್ವಭಾವಿ ಸಭೆ ನಡೆಸಲಿದ್ದು, ಮೊದಲ ದಿನವಾದ ನಿನ್ನೆ ಕಂದಾಯ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಉನ್ನತ ಶಿಕ್ಷಣ, ಲೋಕೋಪಯೋಗಿ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ, ಇಂಧನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಹೊಸ ಯೋಜನೆಗಳ ಬಗ್ಗೆ ಪ್ರಸ್ತಾವನೆಯನ್ನು ಸಂಬಂಧಿಸಿದ ಸಚಿವರು, ಅಧಿಕಾರಿಗಳು ನೀಡಿದ್ದಾರೆ. ಕಂದಾಯ ಇಲಾಖೆ ಸಚಿವ ಆರ್. ಅಶೋಕ್ ಅವರು, ಕಂದಾಯ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಬೇಡಿಕೆ ಮಂಡಿಸಿದ್ದಾರೆ. ಲೋಕೋಪಯೋಗಿ ಇಲಾಖೆಗೆ ಹೆಚ್ಚುವರಿಯಾಗಿ 5000 ಕೋಟಿ ರೂಪಾಯಿ ಅನುದಾನ ನೀಡುವಂತೆ ಸಚಿವ ಸಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ. ಬಜೆಟ್ ಪೂರ್ವಭಾವಿ ಸಭೆ ಮುಂದುವರೆಯಲಿದ್ದು, ವಿವಿಧ ಇಲಾಖೆಗಳ ಬೇಡಿಕೆ ಪ್ರಸ್ತಾವನೆ ಬಗ್ಗೆ ಸಿಎಂ ಮಾಹಿತಿ ಪಡೆದಿದ್ದಾರೆ.