ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ.
ಸಿಎಂ ಫೆಬ್ರವರಿ 9 ರಿಂದ ಸಿಎಂ ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಇದಾದ ನಂತರ ಸಂಘ ಸಂಸ್ಥೆಗಳ ಜೊತೆಗೆ ಸಭೆ ನಡೆಸಿ ಪ್ರಸ್ತಾವನೆ ಸ್ವೀಕರಿಸಲಿದ್ದಾರೆ. ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಫೆಬ್ರವರಿ 25ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ 4ರಂದು ಬಜೆಟ್ ಅಧಿವೇಶನ ಶುರುವಾಗಲಿದೆ ಎನ್ನಲಾಗಿದೆ.
ಮುಂದಿನ ವರ್ಷ ವಿಧಾನಸಭೆ ಚುನಾವಣೆ ಇರುವುದರಿಂದ ಈ ಬಾರಿ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.