
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಪಡಿತರದಲ್ಲಿ ಒಂದು ಕೆಜಿ ರಾಗಿ ಅಥವಾ ಜೋಳ ವಿತರಿಸುವುದಾಗಿ ಹೇಳಿದ್ದಾರೆ.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಡಿಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಕಿಯೊಂದಿಗೆ ಕಬ್ಬಿಣ, ಪೋಲಿಕ್ ಆಮ್ಲ, ವಿಟಮಿನ್ ಬಿ12 ಪೋಷಕಾಂಶಗಳನ್ನು ಸೇರ್ಪಡೆ ಮಾಡಿದ ಸಾರವರ್ಧಿತ ಅಕ್ಕಿಯನ್ನು ವಿತರಿಸಲಾಗುತ್ತದೆ. 93 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ವಿತರಿಸಲಾಗುವುದು.
ಇದರೊಂದಿಗೆ ಪಡಿತರದಲ್ಲಿ 5 ಕೆಜಿ ಅಕ್ಕಿಯ ಜೊತೆಗೆ ಒಂದು ಕೆಜಿ ರಾಗಿ ಅಥವಾ ಜೋಳ ವಿತರಿಸಲಾಗುವುದು. ಇದರಿಂದ 4.34 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.