ಬೆಂಗಳೂರು: ವಲಸೆ ಕಾರ್ಮಿಕರಿಗಾಗಿ 10 ಜಿಲ್ಲೆಗಳಲ್ಲಿ ವಸತಿ ಸಮುಚ್ಚಯಗಳ ನಿರ್ಮಾಣ ಮಾಡಲಾಗುವುದು. ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ವಸತಿ ಸಮುಚ್ಚಯ ನಿರ್ಮಿಸಲಾಗುವುದು ಎಂದು ಘೋಷಿಸಿದ್ದಾರೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕೆಲಸ ಹುಡುಕಿಕೊಂಡು ರಾಜ್ಯದ ವಿವಿಧ ಜಿಲ್ಲೆಗಳಿಗೆ ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆಗಳಿಲ್ಲದೆ ಪರದಾಡುತ್ತಿದ್ದಾರೆ. ಕೈ ಸೇರುವ ಅಲ್ಪ ವೇತನದಲ್ಲೇ ವಸತಿಗೆ ಹೆಚ್ಚಿನ ಹಣ ಬಳಸಬೇಕಾಗುತ್ತದೆ. ಇದನ್ನು ಗಮನಿಸಿ ರಾಜ್ಯ ಸರ್ಕಾರ 10 ಜಿಲ್ಲೆಗಳಲ್ಲಿ 100 ಕೋಟಿ ರೂ ವೆಚ್ಚದಲ್ಲಿ ವಸತಿ ಸಮುಚ್ಚಯಗಳನ್ನು ನಿರ್ಮಿಸಲಿದೆ ಎಂದು ಹೇಳಲಾಗಿದೆ.