ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಮಂಡಿಸಲಿರುವ ಬಜೆಟ್ ಮೇಲೆ ರಾಜ್ಯದ ಜನರ ನಿರೀಕ್ಷೆ ಹೆಚ್ಚಾಗಿದೆ. ವಿವಿಧ ವಲಯಗಳಿಗೆ ಹೆಚ್ಚಿನ ಅನುದಾನ, ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ಏಳನೇ ವೇತನ ಆಯೋಗ ವರದಿಯಲ್ಲಿನ ಕೆಲವು ಅಂಶಗಳ ಸೇರ್ಪಡೆ ಸಾಧ್ಯತೆ ಇದೆ. ಅಬಕಾರಿ ಮೇಲಿನ ಸುಂಕ ಏರಿಕೆ ಮಾಡುವ ಸಾಧ್ಯತೆ ಇದೆ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿಶೇಷ ಅನುದಾನ, ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುದಾನ ನೀಡುವ ಸಾಧ್ಯತೆ ಇದೆ.
ಟ್ರಾಫಿಕ್ ಸಮಸ್ಯೆ ನಿವಾರಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಅನುದಾನ ನೀಡುವ ಸಾಧ್ಯತೆ ಇದ್ದು, ನಮ್ಮ ಮೆಟ್ರೋ ಮಾರ್ಗ ವಿಸ್ತರಣೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಅಲ್ಲದೇ, ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಅನುದಾನ ಘೋಷಣೆ ಮಾಡುವ ಸಾಧ್ಯತೆ ಇದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ದೇವಸ್ಥಾನಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ನಿರೀಕ್ಷೆ ಇದೆ. ಸುವರ್ಣ ಮಹೋತ್ಸವ ಹೆಸರಿನಲ್ಲಿ ಅಭಿವೃದ್ಧಿ ಪೂರಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಬೆಂಗಳೂರು ಅಥವಾ ಕಲಬುರಗಿಯಲ್ಲಿ ವಚನ ಮಂಟಪ, ವಚನ ವಿವಿ ಸ್ಥಾಪನೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಚಿಕ್ಕೋಡಿ, ಗೋಕಾಕ್ ಸೇರಿದಂತೆ ಕೆಲವು ನೂತನ ಜಿಲ್ಲಾ ಕೇಂದ್ರಗಳ ಘೋಷಣೆ ಮಾಡಬಹುದು. ಜಿಲ್ಲೆ, ತಾಲೂಕು ಕೇಂದ್ರಗಳಿಗೂ ಇಂದಿರಾ ಕ್ಯಾಂಟೀನ್ ವಿಸ್ತರಿಸುವ ಸಾಧ್ಯತೆ ಇದೆ. ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಬ್ರಾಂಡ್ ಬೆಂಗಳೂರುಗೆ ಹೆಚ್ಚಿನ ನೆರವು ನೀಡಬಹುದು. 2006ಕ್ಕಿಂತ ಮೊದಲು ನೇಮಕಾತಿ ಆದೇಶವಾದ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿಗೆ ಘೋಷಣೆ ಮಾಡುವುದಾಗಿ ಸಾಧ್ಯತೆ ಇದೆ.