alex Certify ಲೋಕಸಭೆ ಚುನಾವಣೆ ಹಿನ್ನೆಲೆ ಫೆಬ್ರವರಿ ಅಂತ್ಯದೊಳಗೆ ರಾಜ್ಯ ಬಜೆಟ್ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಹಿನ್ನೆಲೆ ಫೆಬ್ರವರಿ ಅಂತ್ಯದೊಳಗೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 2024 -25 ನೇ ಸಾಲಿನ ರಾಜ್ಯ ಬಜೆಟ್ ಅನ್ನು 2024ರ ಫೆಬ್ರವರಿ ಅಂತ್ಯದೊಳಗೆ ಮಂಡಿಸಲು ಸರ್ಕಾರ ತೀರ್ಮಾನಿಸಿದೆ.

ಫೆಬ್ರವರಿ ಆರಂಭದಲ್ಲಿ ಕೇಂದ್ರ ಬಜೆಟ್ ಮಂಡನೆ ಆಗಲಿದೆ. ಫೆಬ್ರವರಿ ಅಂತ್ಯದೊಳಗೆ ರಾಜ್ಯ ಬಜೆಟ್ ಮಂಡಿಸಲು ಹಣಕಾಸು ಇಲಾಖೆ ಕ್ರಮ ಕೈಗೊಂಡಿದ್ದು, ಇಲಾಖಾವಾರು ಮಾಹಿತಿ ಕಲೆ ಹಾಕುವ ಕಾರ್ಯಕ್ಕೆ ವೇಗ ನೀಡಲಾಗಿದೆ. ಅಂದಾಜುಗಳ ಸಾಮಾನ್ಯ ಸೂಚನೆ, ವೆಚ್ಚ ತಯಾರಿಕೆ ಸಂಬಂಧ ಇಲಾಖೆ ಮಾಹಿತಿ ಬಯಸಿದ್ದು, ಬಹುತೇಕ ಆಡಳಿತ ಇಲಾಖೆಗಳು ಅಗತ್ಯ ಮಾಹಿತಿ ನೀಡಿಲ್ಲ. ಕಾಲಮಿತಿಯೊಳಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...