alex Certify ನಾಳೆ 5 ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ: ಇಂದು ಆರ್ಥಿಕ ಸಮೀಕ್ಷೆ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ 5 ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ: ಇಂದು ಆರ್ಥಿಕ ಸಮೀಕ್ಷೆ ಬಿಡುಗಡೆ

ನವದೆಹಲಿ: ಇಂದಿನಿಂದ ಏಪ್ರಿಲ್ 6 ರವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಕೇಂದ್ರ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ಬೆಲೆ ಏರಿಕೆ, ಅದಾನಿ ಕಂಪನಿ ವಿರುದ್ಧದ ಆರೋಪ, ಹಣ ದುಬ್ಬರ, ಸರ್ಕಾರದ ಹಲವು ವೈಫಲ್ಯಗಳ ಬಗ್ಗೆ ವಿಪಕ್ಷಗಳು ಪ್ರಸ್ತಾಪಿಸಲು ಸಜ್ಜಾಗಿವೆ. ಪ್ರತಿಪಕ್ಷಗಳ ಟೀಕೆಗೆ ಉತ್ತರ ನೀಡಲು ಆಡಳಿತ ಪಕ್ಷ ಕೂಡ ಸಿದ್ಧತೆ ಮಾಡಿಕೊಂಡಿದೆ.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ ಸುಗಮ ಕಲಾಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಎಲ್ಲಾ ವಿಷಯಗಳು ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗುತ್ತದೆ. ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿಪಕ್ಷಗಳಿಗೆ ಮನವಿ ಮಾಡಿದ್ದಾರೆ. ನಿನ್ನೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಕೇಂದ್ರ ಸಚಿವ ಜೋಶಿ ಈ ಕುರಿತಾಗಿ ವಿಪಕ್ಷಗಳ ನಾಯಕರಿಗೆ ಮನವಿ ಮಾಡಿದ್ದಾರೆ.

ನಾಳೆ ಸಂಸತ್ತಿನಲ್ಲಿ 2023 ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಮಂಡಿಸಲಾಗುವುದು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ, ನಾಳೆ ಐದನೇ ಬಾರಿಗೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಬಜೆಟ್ ಅಧಿವೇಶನದ ಎರಡನೇ ದಿನ ಬಜೆಟ್ ಮಂಡಿಸಲಾಗುವುದು. ಇಂದು ಆರ್ಥಿಕ ಸಮೀಕ್ಷೆ ಬಿಡುಗಡೆ ಮಾಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...