alex Certify BIG NEWS: ಫೆ. 1 ರಂದು ಕೇಂದ್ರ ಬಜೆಟ್, ರಾಜ್ಯದ ಆದ್ಯತೆ ಪಟ್ಟಿ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಫೆ. 1 ರಂದು ಕೇಂದ್ರ ಬಜೆಟ್, ರಾಜ್ಯದ ಆದ್ಯತೆ ಪಟ್ಟಿ ಸಲ್ಲಿಕೆ

ಹುಬ್ಬಳ್ಳಿ: ಜನವರಿ 29 ರಿಂದ ಫೆಬ್ರವರಿ 15 ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದ್ದು, ಜನವರಿ 30 ರಂದು ಸರ್ವಪಕ್ಷ ಸಭೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ಬಜೆಟ್ ಅಧಿವೇಶನ ಎರಡನೇ ಸೆಷನ್ ನಡೆಯಲಿದ್ದು, ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ. ಕರ್ನಾಟಕದ ಆದ್ಯತೆಯ ಪಟ್ಟಿಯನ್ನು ಕೇಂದ್ರಕ್ಕೆ ನೀಡಲಾಗಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಜನವರಿ 16, 17 ರಂದು ರಾಜ್ಯಕ್ಕೆ ಕೇಂದ್ರದ ವರಿಷ್ಠರು ಆಗಮಿಸಲಿದ್ದಾರೆ. ಗೃಹ ಇಲಾಖೆಯ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...