alex Certify ವಿರೋಧ ಪಕ್ಷದ ನಾಯಕನಿಲ್ಲದೆ ಬಜೆಟ್ ಮಂಡನೆ : ವಿಧಾನಸಭೆಯ ಭವ್ಯ ಪರಂಪರೆಗೆ ‘ಕಪ್ಪು ಚುಕ್ಕೆ’ ಎಂದ ಸಚಿವ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರೋಧ ಪಕ್ಷದ ನಾಯಕನಿಲ್ಲದೆ ಬಜೆಟ್ ಮಂಡನೆ : ವಿಧಾನಸಭೆಯ ಭವ್ಯ ಪರಂಪರೆಗೆ ‘ಕಪ್ಪು ಚುಕ್ಕೆ’ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ, ಬಜೆಟ್ ಮಂಡನೆ ಆಗಿದೆ. ಇದು ವಿಧಾನಸಭೆಯ ಭವ್ಯ ಪರಂಪರೆಗೆ ‘ಕಪ್ಪು ಚುಕ್ಕೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಪ್ರಿಯಾಂಕ್ ಖರ್ಗೆ ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ಆಯಿತು. ಬಜೆಟ್ ಮಂಡನೆಯಾಯ್ತು, ಸದನ ಶುರುವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳಾದವು. ಕರ್ನಾಟಕದ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಇಂತಹದ್ದೊಂದು ಕಪ್ಪು ಚುಕ್ಕೆ ಅಂಟಿದೆ. ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ. ವಿಪಕ್ಷ ನಾಯಕನನ್ನು ನೇಮಿಸದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕರ್ನಾಟಕದ ಜನತೆಗೆ, ಸದನದ ಪಾವಿತ್ರ್ಯತೆಗೆ ಅವಮಾನಕರವಾಗಿ ನಡೆದುಕೊಂಡು ರಾಜಕೀಯ ವ್ಯವಸ್ಥೆಯ ಮೇಲೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಬಿಜೆಪಿ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...