ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ: ರಾಷ್ಟ್ರಪತಿ ಭಾಷಣದ ಬಳಿಕ ಆರ್ಥಿಕ ಸಮೀಕ್ಷಾ ವರದಿ ಮಂಡನೆ

ನವದೆಹಲಿ: ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷಾ ವರದಿ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ಶುಕ್ರವಾರ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಭಾಷಣದ ನಂತರ ಆರ್ಥಿಕ ಸಮೀಕ್ಷೆ ವರದಿ ಮಂಡನೆ ಆಗಲಿದೆ.

ಜನವರಿ 31 ರಿಂದ ಏಪ್ರಿಲ್ 4ರವರೆಗೆ ಎರಡು ಹಂತಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ. ಮೊದಲ ಹಂತದ ಬಜೆಟ್ ಅಧಿವೇಶನ ಫೆಬ್ರವರಿ 13 ಕ್ಕೆ ಮುಕ್ತಾಯವಾಗಲಿದ್ದು, ಎರಡನೇ ಹಂತದ ಬಜೆಟ್ ಅಧಿವೇಶನ ಮಾರ್ಚ್ 10ರಂದು ಆರಂಭವಾಗಿ ಏಪ್ರಿಲ್ 4ರಂದು ಮುಕ್ತಾಯವಾಗಲಿದೆ. ಫೆಬ್ರವರಿ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read