alex Certify ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ: ಜು. 7 ಸಿದ್ಧರಾಮಯ್ಯ ದಾಖಲೆಯ 14 ನೇ ಬಜೆಟ್ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ: ಜು. 7 ಸಿದ್ಧರಾಮಯ್ಯ ದಾಖಲೆಯ 14 ನೇ ಬಜೆಟ್ ಮಂಡನೆ

ಬೆಂಗಳೂರು: ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಜಂಟಿ ಕಲಾಪದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.

ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡಿಸಲಿದ್ದಾರೆ. ಬಿಜೆಪಿ ವಿವಾದಿತ ತಿದ್ದುಪಡಿ ಕಾಯ್ದೆಗಳ ರದ್ದು, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಆರೋಪ ಪ್ರತ್ಯಾರೋಪ ಸೇರಿ ಹಲವು ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ.

ವಿವಾದಿತ ತಿದ್ದುಪಡಿ ಕಾಯ್ದೆಗಳ ರದ್ದು ಮಾಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುವ ಸಾಧ್ಯತೆ ಇದೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, 8 ದಿನ ಪ್ರಶ್ನೋತ್ತರ ಕಲಾಪ ನಿಗದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...