
ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ವಿಧಾನಸೌಧದ ಕೆಂಪುಹಾಸಿನ ಮೆಟ್ಟುಲುಗಳ ಮೂಲಕ ಕರೆದೊಯ್ಯಲಾಯಿತು.
ಇಂದಿನಿಂದ ಮಾರ್ಚ್ 21ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಇಂದು ರಾಜ್ಯಪಾಲರು ಉಭಯ ಸನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.